ಬೆಂಗಳೂರು : ಚಿನ್ನದ ಕಳ್ಳಸಾಗಾಣೆ ಆರೋಪಿ ರನ್ಯಾ ರಾವ್ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ವಿಮಾನ ನಿಲ್ದಾಣದ ಮೂಲಕ ಕೋಟ್ಯಂತರ ಬೆಲೆಬಾಳುವ ಚಿನ್ನವನ್ನು ಕಳ್ಳಸಾಗಾಣೆ ಮಾಡಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು.
ಇದೀಗ ಪೊಲೀಸರ ವಶದಲ್ಲಿರುವ ರನ್ಯಾ ರಾವ್ ಅವರ ಜಾಮೀನು ಕೋರಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ರನ್ಯಾ ರಾವ್ ಪರ ವಕೀಲ ಕಿರಣ್ ಜವಳಿ ವಾದ ಮಂಡಿಸಿ, ಜಾಮೀನು ನೀಡುವಂತೆ ಮನವಿ ಮಾಡಿಕೊಂಡರು. ಆದರೆ, ನ್ಯಾಯಾಲಯ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿತು.