ಬೆಂಗಳೂರು: ರಾಜ್ಯದ 3 ಪ್ರಮುಖ ರಾಜಕೀಯ ಪಕ್ಷಗಳ 56ಕ್ಕೂ ಹೆಚ್ಚಿನ ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣಕೂಟದ ನೆಪದಲ್ಲಿ ರಹಸ್ಯ ಸಭೆ ನಡೆಸಿರುವುದು ಇದೀಗ ಬಹಿರಂಗವಾಗಿದೆ.
ಈ ಔತಣಕೂಟದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಈ ಔತಣಕೂಟ ಸಭೆಯ ನೆಪದಲ್ಲಿ ರಾಜ್ಯದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಈ 3 ಪಕ್ಷಗಳ 56 ಕ್ಕೂ ಹೆಚ್ಚಿನ ಶಾಸಕರು ರಹಸ್ಯವಾಗಿ ಸಭೆ ನಡೆಸಿದ್ದಾರೆ.
ಈ ಔತಣಕೂಟ ಸಭೆಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಹೆಚ್ಚಿನ ಶಾಸಕರು ಭಾಗಿಯಾಗಿದ್ದರು ಎಂಬ ಮಾಹಿತಿ ಕೂಡ ಸಿಕ್ಕಿದೆ. ಹೀಗಾಗಿ ಈ ಔತಣಕೂಟ ಸಭೆ ರಾಜ್ಯ ರಾಜಕೀಯದಲ್ಲಿ ಭಾರೀ ಅಲ್ಲೋಲ-ಕಲ್ಲೋಲ ಮಾಡುವ ಸಾಧ್ಯತೆ ಹೆಚ್ಚಾಗಿದೆ.