ಅಪರಾಧ ಸುದ್ದಿ

ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕೆರೆ ಪಾಲು!

Share It

ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ.

ದೀಪಾ(28), ದಿವ್ಯಾ(26) ಹಾಗೂ ಚಂದನಾ(19) ಮೃತ ಮಹಿಳೆಯರು. ಲಕ್ಷ್ಮೀಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಈ ಅವಘಡ ಸಂಭವಿಸಿದೆ. ಚನ್ನಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಚನ್ನಗಿರಿ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ.


Share It

You cannot copy content of this page