ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರು ಜಗಳ ಮಾಡಿಕೊಂಡಿದ್ದು, ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಡನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಅನಿಲ್ ಎಂಬಾತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದೆ. ಆತನ ಸ್ನೇಹಿತನೇ ಆದ ಅಭಿ ಎಂಬಾತನಿಂದ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕುಡಿದ ಮತ್ತಿನಲ್ಲಿದ್ದ ಅಭಿ, ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ವಾಹನಸ ಸರ್ವೀಸ್ ಸೆಂಟರ್‌ನಲ್ಲಿ ಹಲ್ಲೆ ನಡೆದಿದ್ದು, ಅನಿಲ್ ಕತ್ತು ಬೆನ್ನು ಹಾಗೂ ಹೊಟ್ಟೆಗೆ ಬಿಯರ್ ಬಾಟಲಿಯಿಂದ ಇರಿಯಲಾಗಿದೆ. ಹಲ್ಲೆಯ ನಂತರ ಆರೋಪಿ ಅಭಿ ಪರಾರಿಯಾಗಿದ್ದು, ಪೊಲೀಸರು ಹುಟುಕಾಟ ನಡೆಸುತ್ತಿದ್ದಾರೆ.
ಗಾಯಾಳು ಅನಿಲ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.