ಚಿಕ್ಕಮಗಳೂರು : ಕಳೆದ ಎರಡು ದಿನಗಳ ಹಿಂದೆ ಕಳಸ ಪಟ್ಟಣದಿಂದ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಮೂಲತಃ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನಿವಾಸಿಯಾಗಿರುವ ಶ್ರೇಯಸ್ (16) ಮೃತಪಟ್ಟಿರುವ ವಿದ್ಯಾರ್ಥಿಯಾಗಿದ್ದಾನೆ. ಈತ ಕಳಸ ಪಟ್ಟಣದ ಚಿಕ್ಕಪ್ಪನ ಮನೆಯಲ್ಲಿ ವಾಸವಿದ್ದ ನ್ನಲಾಗಿದೆ.
ಶ್ರೇಯಸ್ ಸಾವಿನ ಸುತ್ತ ನೂರೆಂಟು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕಳಸ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಭದ್ರಾ ನದಿಯಿಂದ ಶವವನ್ನು ಹೊರತೆಗೆದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.