ಮೈಸೂರು: ಮಾರ್ಚ್ 22 ರಂದು ಕರ್ನಾಟಕ ಬಂದ್ ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಮತ್ತೊಮ್ಮೆ ವಾಟಾಳ್ ನಾಗರಾಜ್ ಘಂಟಾ ಘೋಷವಾಗಿ ಹೇಳಿದ್ದಾರೆ.
ಕರ್ನಾಟಕ ಬಂದ್ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22 ರಂದು ಕರ್ನಾಟಕ ಬಂದ್ ಯಶಸ್ವಿ ಮಾಡೇ ಮಾಡುತ್ತೇವೆ. ಈಗಾಗಲೇ ಬಹುತೇಕ ಸಂಘಟನೆಗಳು ಬೆಂಬಲ ಕೊಟ್ಟಿವೆ. ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂ.ಇ.ಎಸ್ ನಿಷೇಧ ಮಾಡಬೇಕು.
ಕಳಸಾ-ಬಂಡೂರಿ ಮಹಾದಾಯಿ ಯೋಜನೆ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು ಎಂದು ಅವರು ಒತ್ತಾಯಿಸಿದರು.
ಮಾರ್ಚ್ 22 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲಾಗುವುದು. ಕನ್ನಡಿಗರು ಈ ಬಂದ್‌ಗೆ ಕೈಜೋಡಿಸಬೇಕು. ಸಮಗ್ರ ಕನ್ನಡಿಗರಿಗಾಗಿ ಕನ್ನಡಿಗರ ಗೌರವ ಸ್ವಾಭಿಮಾನಕ್ಕೆ, ಕನ್ನಡಕ್ಕಾಗಿ ಕರ್ನಾಟಕ ಬಂದ್ ಮಾಡಲಾಗುತ್ತದೆ. ಬೆಳಗಾವಿಯಿಂದ ಚಾಮರಾಜನಗರವರೆಗೆ ಬಂದ್ ಮಾಡಲಾಗುವುದು. ಬೆಳಗಾವಿ ಕನ್ನಡಿಗರ ಕೈಯಲ್ಲಿ ಇಲ್ಲ, ಮರಾಠಿಗರ ಕೈಯಲ್ಲಿ ಇದೆ ಎಂದು ಅವರು ಆಕ್ರೋಶಿತರಾಗಿ ನುಡಿದರು.