ಬೆಂಗಳೂರು: ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಎಂಇಎಸ್, ಶಿವಸೇನೆ ಪುಂಡಾಟಿಕೆ ಖಂಡಿಸಿ ಮಾರ್ಚ್ 22ರಂದು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ‘ಕರ್ನಾಟಕ ಬಂದ್’ ಹಿನ್ನೆಲೆ ಶಾಲಾ-ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಆದಾಗ್ಯೂ ಈ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ನಾಳೆ ಮಾರ್ಚ್ 22 ರಂದು ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದೆ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತೆ. ಗೃಹ ಇಲಾಖೆ ಜೊತೆ ಚರ್ಚೆ ನಡೆಸಿ ನಾಳೆ ತೀರ್ಮಾನ ಮಾಡುತ್ತೇವೆ. ಬಂದ್ಗೆ ಸಾರಿಗೆ ಬೆಂಬಲ ಕೊಟ್ಟರೆ ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.