ಬೆಂಗಳೂರು: ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ಗೆ ರಾಜ್ಯಾಧ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವು ಕಡೆ ಸಂಪೂರ್ಣ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ.
ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಭಾಗಗಳಲ್ಲಿ ಕನ್ನಡ ಹೋರಾಟಗಾರರು ಅಂಗಡಿಗಳನ್ನು ಮುಚ್ಚಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಹೋರಾಟಗಾರರು ಬೆಳಗಾವಿ ನಮ್ಮದು ಎಂದು ಘೋಷಣೆ ಕೂಗುವ ಮೂಲಕ ಬಂದ್ ಗೆ ಬೆಂಬಲ ಸೂಚಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಿಕೊಂಡರು.
ಬಸ್ ನಿಲ್ದಾಣಗಳಲ್ಲಿ ಬಸ್ಸುಗಳು ಸಾಲಾಗಿ ನಿಂತಿದ್ದು, ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರವೇ ಇದ್ದು, ಅನೇಕ ಭಾಗಗಳಿಗೆ ಬಸ್ ಸಂಪರ್ಕವಿಲ್ಲದೆ ಪರದಾಟ ನಡೆಸಿದರು.