ಕರ್ನಾಟಕದ ಹನಿಟ್ರ್ಯಾಪ್: ಪಿಐಎಲ್ ಅರ್ಜಿ ವಿಚಾರಣೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್!

Share It

ನವದೆಹಲಿ: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಹನಿಟ್ರ್ಯಾಪ್ ಪ್ರಕರಣದ ವಿಚಾರಣೆ ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ಮು ಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಸಮ್ಮತಿಸಿದೆ. ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.


Share It

You May Have Missed

You cannot copy content of this page