ಹನಿಟ್ರ್ಯಾಪ್ ನಲ್ಲಿ ಮಹಾನಾಯಕನ ಕೈವಾಡ: ಜನಾರ್ದನ ರೆಡ್ಡಿ
ಬೆಂಗಳೂರು: ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್ ನಲ್ಲಿ ಬೀಳಿಸಲು ಪ್ರಯತ್ನಿಸಿದ್ದು ಅವರದ್ದೇ ಪಕ್ಷದ ಮಹಾನಾಯಕ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಸಚಿವ ಕೆ.ಎನ್ ರಾಜಣ್ಣ ಅವರನ್ನು ಹನಿಟ್ರ್ಯಾಪ್ ನಲ್ಲಿ ಕೆಡವಲು ಯತ್ನಿಸಿದ್ದು ಕಾಂಗ್ರೆಸ್ ಪಕ್ಷದ ಮಹಾನ್ ನಾಯಕ. ಇದು ಕಾಂಗ್ರೆಸ್ ಪಕ್ಷದ ನಾಯಕರಿಗೂ ಗೊತ್ತು. ಆದಷ್ಟು ಬೇಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಬೇಕು. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿರುತ್ತಾರೆ ಎಂದು ವಾಗ್ದಾಳಿ ನಡೆಸಿದರು.


