ರಾಜಕೀಯ ಸುದ್ದಿ

ನಿತಿನ್ ಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ

Share It

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದ್ದು, ರಾಜಕೀಯ ಭೇಟಿಯಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೆ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳಬವಣಿಗೆಗಳ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಹನಿಟ್ರಾö್ಯಪ್, ದಲಿತ ಸಿಎಂ ಚರ್ಚೆಗಳು ಜೋರಾಗಿ ಸದ್ದು ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಸಚಿವರ ಭೇಟಿ ಮಹತ್ವ ಪಡೆದಿದೆ. ಸತೀಶ್ ಜಾರಕಿಹೊಳಿ, ಸಿಎಂ ರೇಸ್‌ನಲ್ಲಿದ್ದು, ದಲಿತ ಸಿಎಂ ಸ್ಥಾನ ನೀಡುವುದಾದರೆ ನಾನು ಮುಂಚೂಣಿಯಲ್ಲಿದ್ದೇನೆ ಎಂಬ ಸಂದೇಶ ನೀಡಿದ್ದಾರೆ.


Share It

You cannot copy content of this page