ಪ್ರೌಢಶಾಲಾ ಶಿಕ್ಷಕರ ನಿಯೋಜನೆ ರದ್ದು

Share It

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ರದ್ದುಪಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸರ್ಕಾರದ ಆದೇಶಾನುಸಾರ 2024-25ನೇ ಸಾಲಿನ ಶೈಕ್ಷಣಿಕ ಅವಧಿಯವರೆಗೆ ಕೆಲವು ಶಿಕ್ಷಕರುಗಳನ್ನು ಸರ್ಕಾರವು ತಾತ್ಕಾಲಿಕವಾಗಿ ನಿಯೋಜಿಸಿದೆ.

ಆದರೆ ಕೆಲವು ಜಿಲ್ಲೆಗಳ ಉಪನಿರ್ದೇಶಕರುಗಳು ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಯೋಜನೆ ಮೇಲಿರುವ ಶಿಕ್ಷಕರುಗಳನ್ನು ಮಾರ್ಚ್ ಅಂತ್ಯಕ್ಕೆ ಕರ್ತವ್ಯದಿಂದ ಬಿಡುಗಡೆಗೊಳಿಸದಿರುವುದು ಗಮನಕ್ಕೆ ಬಂದಿರುತ್ತದೆ.

ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಮರುಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ನಿಯೋಜನೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಿಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅಂತಹ ಶಿಕ್ಷಕರುಗಳನ್ನು ಕೂಡಲೆ ಶಾಲಾ ಕರ್ತವ್ಯದಿಂದ ಬಿಡುಗಡೆಗೊಳಿಸತಕ್ಕದ್ದು ಹಾಗೂ ಬಿಡುಗಡೆಗೊಂಡ ಶಿಕ್ಷಕರು ದಿನಾಂಕ: 09/04/2025 ರೊಳಗೆ ಮೂಲ ಶಾಲೆಯಲ್ಲಿ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು,

ಒಂದು ವೇಳೆ ನಿಗದಿತ ದಿನಾಂಕದೊಳಗೆ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಅಂತಹ ಶಿಕ್ಷಕರನ್ನು ಅನಧಿಕೃತ ಗೈರು ಹಾಜರಿ ಪ್ರಕರಣ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲು ತಿಳಿಸಿದ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಶಿಕ್ಷಕರ ವೇತನವನ್ನು ಪಾವತಿಸದೇ ತಡೆಹಿಡಿಯಲು ಸೂಚಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ವೇತನ ಬಟಾವಾಡೆ ಅಧಿಕಾರಿಗಳನ್ನೇ ನೇರಹೊಣೆಗಾರನ್ನಾಗಿ ಮಾಡಲಾಗುವುದು.

ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿರುವ ಹಾಗೂ ಮೂಲ ಶಾಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿರುವ ಶಿಕ್ಷಕರ ಜಿಲ್ಲಾವಾರು ಪಟ್ಟಿಯನ್ನು ನಮೂನೆಯಲ್ಲಿರುವಂತೆ ದಿನಾಂಕ:

17/04/20250 ರ ಒಳಗಾಗಿ ಈ ಕಛೇರಿಗೆ ಕಳುಹಿಸಲು ತಿಳಿಸಿದೆ ತಪ್ಪಿದಲ್ಲಿ ಅಂತಹ ಉಪನಿರ್ದೇಶಕರು(ಆಡಳಿತ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಂಬಂಧಿಸಿದ ಸಿಬ್ಬಂಧಿಗಳ ವಿರುದ್ಧ ಕರ್ತವ್ಯ ನಿರ್ಲಕ್ಷತೆ ಎಂದು ಪರಿಗಣಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.


Share It

You May Have Missed

You cannot copy content of this page