ಐಪಿಎಲ್ ೨೦೨೫ರ ಆವೃತ್ತಿಯ ೨೪ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಹಾಗಾದ್ರೆ ಇಂದು ಹೋಂ ಗ್ರೌಂಡ್‌ನಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಆರ್‌ಸಿಬಿ ಪ್ಲೇಯಿಂಗ್ ೧೧ ಹೇಗಿದೆ ಎಂದು ತಿಳಿಯಿರಿ.
ಈಗಾಗಲೇ ಈ ಹಿಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಅವರದ್ದೇ ಹೋಂ ಗ್ರೌಂಡ್ ವಾಂಖೆಡೆಯಲ್ಲಿ ಆರ್‌ಸಿಬಿ ಗೆಲವು ಸಾಧಿಸಿ ದಾಖಲೆ ನಿರ್ಮಾಣ ಮಾಡಿದೆ. ಇದುವರೆಗೂ ಆಡಿರುವ ನಾಲ್ಕು ಪಂದ್ಯಗಳಲ್ಲಿ ೩ರಲ್ಲಿ ಆರ್‌ಸಿಬಿ ಗೆಲ್ಲುವು ಸಾಧಿಸಿದ್ದು, ಈ ಮೂಲಕ ಆರು ಅಂಕಗಳೊAದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.
ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್, ಬಳಿಕ ಸಿಎಸ್‌ಕೆ ವಿರುದ್ಧ ಗೆಲುವು ಸಾಧಿಸಿತು. ಮೂರನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲನುಭವಿಸಿತು. ಬಳಿಕ ಮತ್ತೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿತು. ಇನ್ನು ಇಂದು (ಏಪ್ರಿಲ್ ೧೦) ಹೋಂ ಗ್ರೌಂಡ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲಲೇಬೇಕೆನ್ನುವ ಪಣ ತೊಟ್ಟಿದೆ. ಆದ್ದರಿಂದ ಬಲಿಷ್ಠ ತಂಡವನ್ನೇ ಕಟ್ಟಿದೆ. ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೂ ಆಡಿರುವ ಮೂರು ಪಂದಗಳಲ್ಲೂ ಕೂಡ ಗೆಲುವು ಸಾಧಿಸಿ ೬ ಅಂಕಗಳೊAದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನು ಇಂದು ಆರ್‌ಸಿಬಿ ವಿರುದ್ಧ ಭಾರೀ ರನ್‌ಗಳ ಅಂತರದಿAದ ಗೆಲುವು ಸಾಧಿಸಿ ಮೇಲೇರುವ ತವಕದಲ್ಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ ೭.೩೦ರಿಂದ ಪಂದ್ಯ ಆರಂಭವಾಗಲಿದೆ. ಇದಕ್ಕೂ ಮುಂಚೆ ೭ ಗಂಟೆಗೆ ಟಾಸ್ ಆಗಲಿದ್ದು, ಈ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆರ್ಸಿಬಿಗೆ ಇದು ಐದನೇ ಪಂದ್ಯವಾಗಿದೆ. ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವ ಬೆಂಗಳೂರು, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇಂದಿನ ಪಂದ್ಯ ಹೈವೋಲ್ಟೇಜ್ ಆಗಿರಲಿದೆ. ಆದ್ದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಯಿಂಗ್-೧೧ನಲ್ಲಿ ಬದಲಾವಣೆ ಮಾಡಿಕೊಂಡರೂ ಅಚ್ಚರಿಯಿಲ್ಲ. ಯಾಕೆಂದ್ರೆ ಕಳೆದ ಬಾರಿ ತವರಿನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಸಿಬಿ ಸೋಲನುಭವಿಸಿದೆ. ಆದ್ದರಿಂದ ಈ ಮೈದಾನ ಸ್ಪಿನ್ನರ್‌ಗಳಿಗೆ ಹೇಳಿ ಮಾಡಿಸಿದ್ದಾಗಿದೆ. ಆದ್ದರಿಂದ ವೇಗಿಗಳ ಬದಲಾಗಿ ಸ್ಪಿನ್ನರ್ಸ್ಗೆ ಹೆಚ್ಚು ಆಧ್ಯತೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆರ್‌ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೆವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್ವುಡ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸುಯೇಶ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಮಿಚೆಲ್ ಸ್ಟಾರ್ಕ್, ಮುಖೇಶ್ ಕುಮಾರ್.