ಸುದ್ದಿ

ಅಮೇಜಾನ್ ಪ್ರೈಮ್ ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ “ಮಿಥ್ಯ”

Share It

ನಟ ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.

ಇತ್ತೀಚೆಗಷ್ಟೇ ರಕ್ಷಿತ್ ಶೆಟ್ಟಿ ನಿರ್ಮಾಣದ “ಮಿಥ್ಯ” ಎಂಬ ಚಿತ್ರ ತೆರೆ ಕಂಡಿತ್ತು. ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನೋಡುಗರು ಫಿದಾ ಆಗಿದ್ದರು.

ವಿಮರ್ಶಕರ ಪ್ರಶಂಸೆಗೂ ಪಾತ್ರವಾಗಿದ್ದ “ಮಿಥ್ಯ” ಚಿತ್ರ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಮೆಚ್ಚುಗೆ ಗಳಿಸಿದೆ. ಈಗ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ.

“ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ “ಮಿಥ್ಯ” ಚಿತ್ರದ ನಿರ್ದೇಶಕರು. ‌‌‌ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದೆ. ಮಾಸ್ಟರ್ ಅತೀಶ್ ಎಸ್ ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ.

ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ “ಮಿಥ್ಯ” ಚಿತ್ರಕ್ಕಿದೆ.


Share It

You cannot copy content of this page