ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆದಿದ್ದು, ಪ್ರವಾಸಕ್ಕೆಂದು ತೆರಳಿದ್ದ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ೧೨ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಾಶ್ಮೀರದ ಸ್ವಿಟ್ಜೆರ್ಲೆಂಡ್ ಎಂದೇ ಖ್ಯಾತಿ ಗಳಿಸಿರುವ ಬೈಸರನ್ ಕಣಿವೆಯಲ್ಲಿ ಕುದುರೆಯ ಮೂಲಕ ಪ್ರವಾಸಕ್ಕೆ ತೆರಳಿದ್ದವರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ಅಟ್ಟಹಾಸಕ್ಕೆ ಇಬ್ಬರು ಪ್ರವಾಸಿಗರು ಬಲಿಯಾಗಿದ್ದು, ೧೨ ಪ್ರವಾಸಿಗರು ಗಾಯಗೊಂಡಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕಾಗಮಿಸಿ, ಉಗ್ರರನ್ನು ಸದೆಬಡಿಯುವ ಕೆಲಸದಲ್ಲಿ ನಿರತವಾಗಿವೆ.
Updating…