ಕಸ್ತೂರಿ ರಂಗನ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

Share It

ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಇಸ್ರೊ ಅಧ್ಯಕ್ಷರಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರು ಉತ್ತುಂಗಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಅವರು, ಡಾ. ಕೆ. ಕಸ್ತೂರಿ ರಂಗನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ಜ್ಞಾನ ಮಂಡಳಿ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಅನೇಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ರಾಜ್ಯಸಭಾ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅವರ ಸಾಧನೆ ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ, ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಅವರ ಅಗಲಿಕೆಯಿಂದ ಭಾರತ ಒಬ್ಬ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.


Share It

You May Have Missed

You cannot copy content of this page