ಹಾಸನ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಸಾವು
ಹಾಸನ: ಕಾಡಾನೆ ದಾಳಿಗೆ ಹಾಸನ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಸಕಲೇಶಪುರ ತಾಲೂಕಿನ ಕಾಫಿ ಬೆಳಗಾರ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಖಿನ ಬೈಕೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಡಾನೆಯೊಂದು ಕಾಫಿ ಬೆಳೆಗಾರನನ್ನು ತುಳಿದು ಸಾಯಿಸಿದೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದು, ಕಾಡಾನೆ ಸೆರೆಗೆ ಪ್ರಯತ್ನ ನಡೆಸುತ್ತಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬ್ಬಂದಿಯ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Updating…


