ಬೆಂಗಳೂರು: ಊಬರ್, ಓಲಾ, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ನ್ಯಾಯಾಲಯ ನೀಡಿದ್ದ ಆರು ವಾರಗಳ ಗಡುವಿನ ಹಿನ್ನೆಲೆಯಲ್ಲಿ ಬೈಕ್ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಏಪ್ರಿಲ್ ೨ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ಅನ್ವಯ ಆರು ವಾರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಬೇಕು. ಅವರಾಗಿಯೇ ಸ್ಥಗಿತಗೊಳಿಸಿದ್ದರೆ, ಇಲಾಖೆ ಸೂಕ್ತ ಕ್ರಮ ತೆಗೆದುಕೊಂಡು ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಹೈಕೋರ್ಟ್ ಖಾಸಗಿ ಬಳಕೆಗೆ ಖರೀದಿ ಮಾಡುವ ಬೈಕ್ ಗಳನ್ನು ವಾಣಿಜ್ಯ ಉದ್ದೇಶದಿಂದ ಬಾಡಿಗೆಗಾಗಿ ಬಳಸುವುದನ್ನು ಪ್ರಶ್ನೆ ಮಾಡಿತ್ತು. ಈ ಸಂಬAಧ ಬೈಕ್ ಟ್ಯಾಕ್ಸಿ ಸೇವೆ ನೀಡುವ ಓಲಾ, ಊಬರ್ ಮತ್ತು ರ‍್ಯಾಪಿಡೋ ಕಂಪನಿಗಳಿಗೆ ಆರು ವಾರದಲ್ಲಿ ಸೇವೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಿತ್ತು. ಈ ಸಂಬAಧ ನಿಗಾವಹಿಸುವಂತೆ ಸರಕಾರಕ್ಕೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕ್ರಮವಹಿಸಿದೆ.