ಕೆಎಎಸ್ ಮರುಪರೀಕ್ಷೆ ವಿಚಾರ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

Share It

ಬೆಂಗಳೂರು: 32 ಅಭೈರ್ಥಿಗಳಿಗೆ ಮರುಪರೀಕ್ಷೆಗೆ ನ್ಯಾಯಾಲಯ ಅನುಮತಿ ನೀಡಿರುವ ಬೆನ್ನಲ್ಲಿ ಉಳಿದ ಅಭ್ಯರ್ಥಿಗಳಿಗೂ ಮರುಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರ ಬರೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯಮಾಡಿದೆ.

ಕೆಪಿಎಸ್‌ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯ ಅವರ ಮನವಿಗೆ ಸ್ಪಂದಿಸಿ, ಮರು ಪರೀಕ್ಷೆಗೆ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಂತೆ ನ್ಯಾಯಾಲಯದ ತೀರ್ಪು ಬಂದಕೂಡಲೇ ಪರೀಕ್ಷಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವುದಾಗಿ ತಿಳಿಸಿದ್ದರು. ಸದ್ಯ ಘನ ನ್ಯಾಯಾಲಯ 32 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದೆ.

ಆದರೆ ಉಳಿದ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿ ಎಲ್ಲಾ ಅಭ್ಯರ್ಥಿಗಳಿಗೂ ಮರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದು ನ್ಯಾಯೋಜಿತ ಕ್ರಮವಾಗಿರುತ್ತದೆ. ಈ ಕುರಿತು ಮುಖ್ಯಮಂತ್ರಿಗಳು ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.


Share It

You May Have Missed

You cannot copy content of this page