ಬಿಬಿಎಂಪಿಗೆ ತುಷಾರ್ ಗಿರಿನಾಥ್ ಆಡಳಿತಾಧಿಕಾರಿ, ಮಹೇಶ್ವರ ರಾವ್ ಮುಖ್ಯ ಆಯುಕ್ತರು

Share It

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ. ಬಿಬಿಎಂಪಿ ಆಡಳಿತಾಧಿಕಾರಿ ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತರಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.

ತುಷಾರ್​ ಗಿರಿನಾಥ್​ ಅವರು ಕಳೆದ ಎರಡೂವರೆ ವರ್ಷಗಳಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುಷಾರ್​ ಗಿರಿನಾಥ್​ ಅವರು ಈ ಹಿಂದೆ ಬೆಸ್ಕಾಂ ಮತ್ತು ಬಿಡಬ್ಲ್ಯೂಎಸ್​ಎಸ್​ಬಿ ಮುಖ್ಯಸ್ಥರಾಗಿದ್ದರು.


Share It

You May Have Missed

You cannot copy content of this page