ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದರೂ ಅದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವ ಜಯಂತಿ ಪ್ರಯುಕ್ತ ನಗರದಲ್ಲಿಂದು ಬಸವಣ್ಣನ ಪ್ರತಿಮೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯೋರ್ವನನ್ನು ಮಂಗಳೂರಿನಲ್ಲಿ ಹತ್ಯೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದರು.
“ಅವನು ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ನೀನು ಅಲ್ಲಿದ್ಯಾ? ಎಂದು ಪ್ರಶ್ನೆ ಕೇಳಿದ ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಮರು ಪ್ರಶ್ನಿಸಿದರು. ಮಾತು ಮುಂದುವರೆಸಿದ ಸಿಎಂ ಹೀಗೆಂದರು, ಪಾಕಿಸ್ತಾನ ಪರ ಯಾರೇ ಘೋಷಣೆ ಕೂಗಿದ್ದರೆ ಅದು ತಪ್ಪು ಮತ್ತು ದೇಶದ್ರೋಹ, ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಎಂಬ ಆರೋಪದಲ್ಲಿ ಮಂಗಳೂರಿನಲ್ಲಿ ಒಬ್ಬನನ್ನು ಕೊಲ್ಲಲಾಗಿದೆ, ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ವರದಿ ಬಂದ ಬಳಿಕ ನಿಜಾಂಶ ಗೊತ್ತಾಗುತ್ತದೆ ಎಂದರು.


