ಯಾದಗಿರಿ : ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ.
ಮೃತರನ್ನು ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಎಂದು ಗುರುತಿಸಲಾಗಿದೆ.
ಬೇಸಿಗೆ ಹಿನ್ನೆಲೆ ಸ್ನೇಹಿತರ ಜೊತೆ ಭೀಮಾನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯರ ಸಹಾಯದಿಂದ ನೀರಿನಿಂದ ಮೃತದೇಹವನ್ನು ತೆಗೆಯಲಾಗಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ವಡಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.