SHOCKING | ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ; ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ

Share It

ಲಕ್ನೋ:ಚಲಿಸುತ್ತಿದ್ದ ಬಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಈ ಸಮಯದಲ್ಲಿ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು.

ಬಸ್‌ನಲ್ಲಿ ಹೊಗೆ ತುಂಬಲು ಪ್ರಾರಂಭಿಸಿದ ನಂತರವೇ ಅವರು ಎಚ್ಚರಗೊಂಡರು. ಆಘಾತಕಾರಿ ಸಂಗತಿಯೆಂದರೆ, ಚಾಲಕ ಕಿಟಕಿ ಒಡೆದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ ಇಡೀ ಬಸ್ ಸುಟ್ಟು ಭಸ್ಮವಾಗಿತ್ತು.

ಇನ್ನೂ ಘಟನೆ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.


Share It

You May Have Missed

You cannot copy content of this page