ಅಪರಾಧ ಸುದ್ದಿ

ಗ್ಯಾಸ್ ಸೋರಿಕೆಯಿಂದ ಬೆಂಕಿ: 5 ಮಂದಿಗೆ ಗಾಯ

Share It

ಮೈಸೂರು: ಮನೆಯಲ್ಲಿ ಸಿಲಿಂಡರ್ ಬದಲಾಯಿಸುವಾಗ ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು ಏಕೆಂದರೆ ಇದೀಗ ಮೈಸೂರಲ್ಲಿ ಸಿಲಿಂಡರ್ ಖಾಲಿಯಾಗಿದೆ ಎಂದು ಸಿಲಿಂಡರ್ ಬದಲಾಯಿಸುವ ವೇಳೆಗೆ ಬೆಂಕಿ ಹತ್ತಿಕೊಂಡಿದೆ. ಪರಿಣಾಮ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ನಡೆದಿದೆ.

ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿರುವ ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ, ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page