ಬೆಂಗಳೂರು: ರಾಜಧಾನಿಯಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಮೃತಹಳ್ಳಿ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸಾಬುಲ್ ಬಾದ್ ಶಾ ಹಾಗೂ ಮತ್ತೊಬ್ಬ ಯುವಕ ಎಂದು ಗುರುತಿಸಲಾಗಿದೆ.
ಆರೋಪಿಗಳು ಕೊಲ್ಕತ್ತಾದ ಮುರ್ಷಿದಾಬಾದ್ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳಿಂದ ಎರಡು ಲಕ್ಷ ಮೌಲ್ಯದ ಐದು ಕೆಜಿ ಗಾಂಜಾ ವಶಕ್ಕೆ ಪಡೆದ ಅಮೃತಹಳ್ಳಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.