ಬೆಂಗಳೂರು: ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಲು ಕರ್ನಾಟಕ ಹೈಕೋರ್ಟ್ ಇಂದು (ಬುಧವಾರ) ಆದೇಶ ಹೊರಡಿಸಿದೆ.
ರೈತ ಸೇನೆ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಮಾಡಿದ ಹೈಕೋಟ್, ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ಸಿಜೆ ಎನ್.ವಿ.ಅಂಜಾರಿಯಾ ಮತ್ತು ನ್ಯಾ.ಕೆ.ವಿ.ಅರವಿಂದ್ರಿದ್ದ ಪೀಠ ಆದೇಶ ನೀಡಿದೆ.
ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸಬೇಕು. ನಿಗದಿತ ಅವಧಿಗಿಂತ ಕನಿಷ್ಟ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂದು ಪೀಠ ನಿರ್ದೇಶನ ನೀಡಿದೆ.
ಕರ್ನಾಟಕದಲ್ಲಿ ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಆರಂಭಿಸಲು ರೈತರು ಸಾಕಷ್ಟು ಭಾರೀ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಳೆಗಳು ಕಟಾವು ಮಾಡಿ ದಲ್ಲಾಳಿಗಳಿಗೆ ಮಾರಾಟ ಮಾಡಿದ ನಂತರ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸುತ್ತದೆ. ಆದರೆ ಇದರಿಂದ ರೈತರಿಗೆ ನಷ್ಟ ಉಂಟಾಗುತ್ತದೆ.
ಈ ನಿಟ್ಟಿನಲ್ಲಿ ಬೆಳೆಗಳು ಕಟಾವಿಗೂ ಮುಂಚೆಯೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ರೈತರು ಆಗ್ರಹಿಸಿದ್ದರು. ಈ ವಿಚಾರವಾಗಿ ಸಾಕಷ್ಟು ಚರ್ಚೆಗಳು ಕೂಡ ನಡೆದಿದ್ದವು. ಹೀಗಾಗಿ ರೈತ ಸೇನೆ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಲಾಗಿತ್ತು.
14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ
ಇನ್ನು ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. 14 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮುಂದುವರಿಸಲು ನಿರ್ಧರಿಸಿದ್ದು, ರಾಗಿ, ಹತ್ತಿ, ಎಳ್ಳು ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಕ್ಯಾಬಿನೆಟ್ ಸಭೆ ಬಳಿಕ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.