ಅಪರಾಧ ಕ್ರೀಡೆ ಸುದ್ದಿ

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಿಗೆ RCB ಯಿಂದ ತಲಾ 10 ಲಕ್ಷ ರೂ. ಪರಿಹಾರ

Share It

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಆರ್​ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದು, ಅವರಿಗೆ RCB ಆಡಳಿತ ಮಂಡಳಿ ತಲಾ 10 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದೆ.

ಸರ್ಕಾರದ ಭದ್ರತಾ ವೈಫಲ್ಯದಿಂದಾಗಿ ಈ ಸಾವು ನೋವು ಉಂಟಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಸರ್ಕಾರ ಮಾತ್ರ ಇದನ್ನು ಒಪ್ಪಲು ಸಿದ್ಧವಿಲ್ಲ. ಆದಾಗ್ಯೂ ಸರ್ಕಾರದ ವತಿಯಿಂದ ಅವಘಡದಲ್ಲಿ ಸಾವಿಗೀಡದವರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ಘೋಷಿಸಲಾಗಿತ್ತು. ಹಾಗೆಯೇ ಗಾಯಾಳುಗಳಿಗೂ ಉಚಿತ ಚಿಕಿತ್ಸೆ ನೀಡುವುದಾಗಿ ಹೇಳಿಕೊಂಡಿತ್ತು.

ಸರ್ಕಾರದ ಬಳಿಕ ಕೆಎಸ್​ಸಿಎ ಕೂಡ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ಧನವಾಗಿ 5 ಲಕ್ಷ ರೂಪಾಯಿ ನೀಡುವುದಾಗಿ ಹೇಳಿತ್ತು. ಇದೀಗ ಆರ್​ಸಿಬಿ ಫ್ರಾಂಚೈಸಿ ಕೂಡ ಮಡಿದ ಆರ್​ಸಿಬಿ ಅಭಿಮಾನಿಗಳ ಕುಟುಂಬಗಳ ನೆರವಿಗೆ ಮುಂದಾಗಿದೆ. ಅಲ್ಲದೆ ಈ ಅವಘಡದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಅಭಿಮಾನಿಗಳ ಚಿಕಿತ್ಸೆಗಾಗಿ ಆರ್‌ಸಿಬಿ ಕೇರ್ ನಿಧಿಯನ್ನು ಸಹ ರಚನೆ ಮಾಡಲಾಗಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಈ ಸಂದರ್ಭದಲ್ಲಿ, ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುವಾಗ ಕಾಲ್ತುಳಿತ ಸಂಭವಿಸಿತು, ಇದರಲ್ಲಿ 11 ಅಭಿಮಾನಿಗಳು ಪ್ರಾಣ ಕಳೆದುಕೊಂಡರೆ, 20 ಕ್ಕೂ ಹೆಚ್ಚು ಅಭಿಮಾನಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

𝗢𝗳𝗳𝗶𝗰𝗶𝗮𝗹 𝗦𝘁𝗮𝘁𝗲𝗺𝗲𝗻𝘁: 𝗥𝗼𝘆𝗮𝗹 𝗖𝗵𝗮𝗹𝗹𝗲𝗻𝗴𝗲𝗿𝘀 𝗕𝗲𝗻𝗴𝗮𝗹𝘂𝗿𝘂

The unfortunate incident in Bengaluru yesterday has caused a lot of anguish and pain to the RCB family. As a mark of respect and a gesture of solidarity, RCB has announced a financial… pic.twitter.com/C50WID1FEI

— Royal Challengers Bengaluru (@RCBTweets) June 5, 2025


Share It

You cannot copy content of this page