ರಾಜಕೀಯ ಸುದ್ದಿ

ಕಾಲ್ತುಳಿತ ಪ್ರಕರಣ: ಹೈಕಮಾಂಡ್ ನಿಂದ ಸಿಎಂ ಸಿದ್ದರಾಮಯ್ಯಗೆ ಬುಲಾವ್: ನಾಳೆ ದೆಹಲಿಗೆ ಸಿಎಂ

Share It

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸರಕಾರದ ಪಾತ್ರದ ಕುರಿತು ಹೈಕಮಾಂಡ್ ಮಾಹಿತಿ ಕೇಳಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು, ದೇಶಾದ್ಯಂತ ಸದ್ದು ಮಾಡಿದೆ. ಬಿಜೆಪಿ ಕೂಡ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ವ್ಯಾಪಕ ಹೋರಾಟ ನಡೆಸುತ್ತಿದೆ. ಇದು ಸರಕಾರ ಮತ್ತು ಪಕ್ಷಕ್ಕೆ ಮುಜಗರ ತರುತ್ತಿರುವ ಹಿನ್ನೆಲೆಯಲ್ಲಿ ಸಿಎಂಗೆ ಹೈಕಮಾಂಡ್ ಬುಲಾವ್ ನೀಡಿದೆ. ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.


Share It

You cannot copy content of this page