ರಾಜಕೀಯ ಸುದ್ದಿ

ರಾಜ್ಯದಲ್ಲಿ ಜಾತಿಗಣತಿ ಮರುಸರ್ವೇ: ದೆಹಲಿಯ ಎಐಸಿಸಿ ಸಭೆಯಲ್ಲಿ ನಿರ್ಧಾರ

Share It

ನವದೆಹಲಿ: ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಪ್ರಮುಖವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರೋ ಕಾರಣ, ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲು ನಿರ್ಧಾರ ಮಾಡಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾತನಾಡಿದರು. ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಿರ್ದಿಷ್ಟ ಕಾಲಮಿತಿಯಲ್ಲಿ ಮರು ಸರ್ವೇ… ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ‌ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಜೂನ್ 12ರ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ, ಒಳ ಮೀಸಲಾತಿ ಚರ್ಚೆ ನಡೆಸಲಿದ್ದು, ಕೇಂದ್ರ ಸರ್ಕಾರ ಜಾತಿ ಜನಗಣತಿಗೂ ಮುನ್ನ ಜಾರಿಗೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.


Share It

You cannot copy content of this page