ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಡಾ. C.N. ಮಂಜುನಾಥ್
ಬೆಂಗಳೂರು: ICAI ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಚಾರ್ಟರ್ಡ್ ಅಕೌಂಟೆಂಟ್ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ – ಆರೋಹಣ 2025 ರಲ್ಲಿ ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಭಾಗವಹಿಸಿದ್ದರು.
ಸಮ್ಮೇಳನವೂ ಚಾರ್ಟರ್ಡ್ ಅಕೌಂಟೆಂಟ್ ಗಳನ್ನು ಸಬಲೀಕರಣಗೊಳಿಸಲು ಮತ್ತು ಉತ್ತೇಜಿಸಲು ನುರಿತ ತಜ್ಞರಿಂದ ಉಪಯುಕ್ತ ಸಲಹೆಗಳು, ಸಂವಾದಾತ್ಮಕ ಚರ್ಚೆಗಳು ಸೇರಿದಂತೆ ಅನೇಕ ಅರ್ಥಪೂರ್ಣ ಅವಕಾಶಗಳಿಗೆ ವೇದಿಕೆಯಾಗಿತ್ತು.

ಕಾರ್ಯಕ್ರಮದಲ್ಲಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಆಡಳಿತ ಮಂಡಳಿ ಸದಸ್ಯರು ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು.


