ಬಿ.ಆರ್. ಪಾಟೀಲ್ ಆಡಿಯೋ; ಸರ್ಕಾರದ ವಿರುದ್ಧ ಕೇಂದ್ರ ಸಚಿವರ ಕಿಡಿ
ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ಸಿಎಂ ವಿರುದ್ಧ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ವಸತಿ ಇಲಾಖೆ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ
ಹೆಚ್.ಕೆ. ಪಾಟೀಲ್ ಏನು ಮಾಡುತ್ತಿದ್ದರು?:
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.