ರಾಜಕೀಯ ಸುದ್ದಿ

ಕೇಂದ್ರಕ್ಕೆ ಕಣ್ಣು-ಕಿವಿ ಇಲ್ಲ: ಕೇಂದ್ರ ಸರಕಾರದ ವಿರುದ್ಧ ಸಚಿವ ರಾಮಲಿಂಗಾ ರೆಡ್ಡಿ ಗುಡುಗು

Share It

ಮಂಗಳೂರು: ಕೇಂದ್ರ ಸರಕಾರಕ್ಕೆ ಕಣ್ಣು ಕಿವಿ ಇಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನ ನೀಡುವಲ್ಲಿ ಕೇಂದ್ರ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಕೋಟೇಶ್ವರದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನಮಗೆ ಬರಬೇಕಾದ ಅನುದಾನವನ್ನು ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. ಇದರಿಂದಾಗಿ ಶಾಸಕರಿಗೆ ಅನುದಾನ ಹಂಚಿಕೆ ಮಾಡುವುದು ಸ್ವಲ್ಪ ವ್ಯತ್ಯಾಸವಾಗುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಅನೇಕ ಬಾರಿ ಅನುದಾನ ಹಂಚಿಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದರು.

ಇಂದು ಕೂಡ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ, ಬಾಕಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ನಾವು ಹೋರಾಟವನ್ನು ನಡೆಸಿದ್ದೇವೆ. ಹೀಗಿದ್ದೂ, ಕೇಂದ್ರ ಸರಕಾರ ಮಲತಾಯಿ ಧೋರಣೆ ತಳೆದಿದೆ ಎಂದರು.

ಬಹಿರಂಗ ಹೇಳಿಕೆ ಸರಿಯಲ್ಲ: 135 ಶಾಸಕರಿಗೂ ಎಲ್ಲ ಅಧಿಕಾರ ನೀಡಲು ಸಾಧ್ಯವಿಲ್ಲ. ಕೆಲವೊಮ್ಮೆ ವ್ಯತ್ಯಾಸಗಳಾಗುತ್ತವೆ. ಅದನ್ನು ಸರಿಪಡಿಸಿಕೊಂಡು ಮುಂದೆ ಹೋಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಕಷ್ಟವಾಗುತ್ತದೆ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಬೇಕು. ಬಹಿರಂಗವಾಗಿ ಮಾತನಾಡುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಅವರು ತಿಳಿಸಿದರು.


Share It

You cannot copy content of this page