ಹಾಸನ: ಜಿಲ್ಲೆಯಲ್ಲಿನ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ 26ಕ್ಕೇರಿದ್ದು, ಬೇಲೂರು ತಾಲೂಕಿನ ವ್ಯಕ್ತಿಯೊಬ್ಬರು ಇಂದು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾದಿಹಳ್ಳಿ ಗ್ರಾಮದ 30 ವರ್ಷದ ರವಿಕುಮಾರ್ ಎಂಬುವವರು ತಮ್ಮ ಪತ್ನಿಯ ಮನೆ ಯಕ್ಕಶೆಟ್ಟಿಹಳ್ಳಿಗೆ ಹೋಗಿದ್ದಾಗ, ಅಲ್ಲಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟವರ ಸಂಖ್ಯೆ 26ಕ್ಕೇರಿದೆ. ಸೋಮವಾರ ಒಂದೇ ದಿನ ಐದು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದರು.