ಬೆಂಗಳೂರು: ಪೆನ್‌ಡ್ರೆöÊವ್, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಮಹಿಳೆಯನ್ನು ಅಪಹರಿಸಿದ ಪ್ರಕರಣಲ್ಲಿ ಆರೋಪ ಎದುರಿಸುತ್ತಿರುವ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಣೆ ಮಾಡಿದೆ.
ಮಹಿಳೆಯನ್ನು ಕೇವಲ ರೇವಣ್ಣ ಕರೆತರಲು ಹೇಳಿದ್ದಾರೆ ಎಂದಷ್ಟೇ ದೂರಿನಲ್ಲಿ ತಿಳಿಸಲಾಗಿದೆ. ಹೀಗಾಗಿ, ಅವರನ್ನು ಆರೋಪಿ ಎನ್ನಲಾಗದು ಎಂದು ರೇವಣ್ಣ ಪರ ವಕೀಲರು ವಾದಿಸಿದ್ದರು. ಆದರೆ, ನ್ಯಾಯಾಲಯ ಅವರ ವಾದವನ್ನು ಪುರಸ್ಕರಿಸಲಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮೇ ೬ಕ್ಕೆ ನ್ಯಾಯಾಲಯವು ಮೂಂದೂಡಿದೆ.
ಮೈಸೂರಿನ ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆ ಅಪಹರಣ ಕುರಿತಂತೆ ದೂರು ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ನನ್ನ ತಾಯಿ ಅಪಹರಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಎಸ್‌ಐಟಿ ರೇವಣ್ಣ ಅವರಿಗೆ ನೋಟಿಸ್ ನೀಡಿತ್ತು.