ಚನ್ನರಾಯಪಟ್ಟಣ: ತಮಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂಬಂತಹ ಬೇಡಿಕೆಯನ್ನು ಅರಸೀಕೆರೆ ಶಾಸಕ ಕೆ.ಶಿವಲಿಂಗೇಗೌಡ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮುಂದಿಡ್ಡಿದ್ದಾರೆ.
ಚನ್ನರಾಯಪಟ್ಟಣದಲ್ಲಿ ನಡೆದ ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಶಿವಲಿಂಗೇಗೌಡ, ಹಾಸನ ಜಿಲ್ಲೆಗೆ ಅನ್ಯಾಯವಾಗಿದೆ. ನನಗೆ ಅವಕಾಶ ನೀಡದರೆ ಕೆಲಸ ಮಾಡಿ ತೋರಿಸುತ್ತೇನೆ. ಎಂದಿದ್ದಾರೆ.
ಕೃಷ್ಣ ಬೈರೇಗೌಡ. ರಿಜ್ವಾನ್ ಅರ್ಷದ್ ಅವರಿಗೆ ಅವಕಾಶ ಸಿಗಬೇಕು. ಹಾಸನ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.