ತಿರುವನಂತಪುರ:ಕೇರಳದ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದ್ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.
101 ವರ್ಷ ವಯಸ್ಸಾಗಿದ್ದ ಅಚ್ಯುತಾನಂದ್ ಅವರಿಗೆ ಜೂನ್ 23 ರಂದು ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ವಯೋಸಹಜ ಕಾರಣದಿಂದ ಅವರು ಇಂದು ನಿಧನರಾಗಿದ್ದು, ಜುಲೈ 23 ರಂದು ಸಕಲ ಸರಕಾರಿ ಗೌರವಗಳೊಂದಿಗೆ ಅವರ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.