ನೆಲಮಂಗಲ: ನೆಲಮಂಗಲದ ತ್ಯಾಮಗೊಂಡ್ಲು ಗ್ರಾಮದಲ್ಲಿ 38 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ತಾಲೂಕಿನ ಗ್ರಾಮದ ರುದ್ರೇಶ್ ಎಂಬ 38 ವರ್ಷದ ಯುವಕ ಮೃತಪಟ್ಟಾತ. ಈತ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ಸಂಜೆ ಮನೆಯಲ್ಲಿದ್ದಾಗ ಕುಸಿದುಬಿದ್ದಿದ್ದರು.
ಕುಟುಂಬಸ್ಥರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಸಿದ್ದರು.
ಆಸ್ಪತ್ರೆಗೆ ಕರೆದೊಯ್ಯುವಾಗಲೇ ರುದ್ರೇಶ್ ಮೃತಪಟ್ಟಿದ್ದು, ತ್ಯಾಮಗೊಂಡ್ಲು ಠಾಣೆಯಲ್ಲಿ ಯುಡಿಆರ್ ದಾಖಲು ಮಾಡಲಾಗಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಡುವವರ ಸಂಖ್ಯೆ ಮುಂದುವರಿದಿದೆ,