ಮಂಡಿ: ನಟಿ ಕಂಗನಾ ರಾಣವತ್ ಪ್ರತಿನಿಧಿಸುವ ಮಂಡಿ ಕ್ಷೇತ್ರದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಮಂಡಿ ಪಟ್ಟಣದಲ್ಲಿ ಉಂಟಾದ ದಿಡೀರ್ ಪ್ರವಾಹದಿಂದ ನಗರದಲ್ಲಿ ಭೂಕುಸಿತ ಉಂಟಾಗಿದೆ. ಚಂಢೀಗಢ-ಮೊನಾಲಿ ಹೆದ್ದಾರಿಯಲ್ಲಿ ಭೂಕುಸಿತದಿಂದಾಗಿ ಸಂಚಾರ ಸ್ಥಗಿತಗೊಂಡಿದೆ. ನೂರಾರು ಮನೆಗಳಿಗೆ ಹಾನಿಯಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಮಾಹಿತಿಗಳ ಪ್ರಕಾರ ಮೂವರು ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿ ಕಣ್ಮರೆಯಾಗಿದ್ದಾನೆ ಎಂದು ಹೇಳಲಾಗಿದೆ. ಈತ ಪ್ರವಾಹದ ಅವಶೇಷಗಳಡಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಸುಮಾರು 20ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ ಎಂದು ವರದಿಗಳು ತಿಳಿಸಿವೆ.

