ಬೆಂಗಳೂರು: ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡ ಸರ್ಕಾರದ ಕ್ರಮಕ್ಕೆ ಜಯ ಸಿಕ್ಕಂತಾಗಿದ್ದು, ಏಕಸದಸ್ಯ ಪೀಠದ ಮಧ್ಯಂತರ ಆದೇಶ ರದ್ದು ಮಾಡಲು ವಿಭಾಗೀಯ ಪೀಠ ನಿರಾಕರಿಸಿದೆ.
ಜತೆಗೆ ಮೂಲ ಅರ್ಜಿಯನ್ನು ಹೊಸದಾಗಿ ವಿಚಾರಣೆ ನಡೆಸಿ, ನಾಲ್ಕು ತಿಂಗಳಲ್ಲಿ ಇತ್ಯರ್ಥಪಡಿಸಬೇಕು ಎಂದು ಸೂಚನೆ ನೀಡಿದೆ.
ಜುಲೈ 17ರಂದು ಏಕಸದಸ್ಯ ಪೀಠ ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ, ದೇವಾಲಯದ ಟ್ರಸ್ಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರಿದ್ದ ವಿಭಾಗೀಯ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಅರ್ಜಿಯ ಸಂಬಂಧ ಸದ್ಯ ಮಧ್ಯಂತರ ಆದೇಶವಷ್ಟೈ ಹೊರಬಿದ್ದಿದೆ. ಇನ್ನೂ ಮೂಲ ಅರ್ಜಿ ಬಾಕಿ ಇರುವ ಹಿನ್ನೆಲೆಯಲ್ಲಿ, ಏಕಸದಸ್ಯ ಪೀಠವು ಹೊಸದಾಗಿ ವಿಚಾರಣೆ ನಡೆಸಿ 4 ತಿಂಗಳೊಳಗೆ ಅರ್ಜಿಯನ್ನು ವಿಲೇವಾರಿ ಮಾಡಬೇಕು. ಆದರೆ, ಈ ನಡುವೆ ಮಧ್ಯಂತರ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತು.
ಗಾಳಿ ಆಂಜನೇಯ ಸ್ವಾಮಿ ದೇವಾಲಯ ಟ್ರ್ಟ್ನ ಟ್ರಸ್ಟಿ ಮತ್ತು ಸಂಚಾಲಕರೂ ಆದ ಬಿ.ಪಿ.ನಾಗರಾಜು ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ, ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಒಪ್ಪಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.
ದೇಗುಲದ ಹುಂಡಿ ಹಣ ಎಣಿಕೆ ಮಾಡುವಾಗ ಹಣ ಕದ್ದಿರುವ ಬಗ್ಗೆ ವಿಡಿಯೋ ದಾಖಲೆಗಳಿವೆ. ಈ ದಾಖಲೆಗಳನ್ನು ಪರಿಶೀಲಿಸಿದಾಗ ಆಡಳಿತ ಮಂಡಳಿ ಹಣದ ವ್ಯವಹಾರಗಳಲ್ಲಿ ಭಾರಿ ಅಕ್ರಮ ಎಸಗಿರುವುದು ಮೇಲ್ನೊûಟಕ್ಕೆ ಮನದಟ್ಟಾಗುತ್ತದೆ. ದೇಗುಲದ ಅವ್ಯವಹಾರಗಳ ಬಗ್ಗೆ ಜಿಲ್ಲಾಧಿಕಾರಿ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ತಿಳಿಸಲಾಗಿದೆ.
ಅಂತೆಯೇ, ಟ್ರ್ಟ್ ಸದಸ್ಯರ ಮಧ್ಯೆ ಸಿವಿಲ್ ವ್ಯಾಜ್ಯ ಇದೆ ಎಂಬುದನ್ನೂ ಜಿಲ್ಲಾಧಿಕಾರಿ ವರದಿಯಲ್ಲಿ ಉಲ್ಲೈಖಿಸಲಾಗಿದೆ.
ಹಾಗಾಗಿ, ಈ ಎಲ್ಲಾ ಅಂಶಗಳ ಆಧಾರದಲ್ಲಿ ಸರ್ಕಾರ ಆದೇಶಕ್ಕೆ ತಡೆ ನೀಡಲಾಗದು ಎಂದು ಪೀಠ ಹೇಳಿತ್ತು.

