ಆರೋಗ್ಯ ಸುದ್ದಿ

ಹಣಕಾಸು ಸಚಿವರ ಭೇಟಿ ಮಾಡಿದ ಡಾ. ಮಂಜುನಾಥ್ : ಕ್ಯಾನ್ಸರ್ ಔಷಧಿಗಳ ಮೇಲಿನ ಸುಂಕ ವಿನಾಯಿತಿಗೆ ಮನವಿ

Share It


ಬೆಂಗಳೂರು: ಬಡವರಿಗೆ ಕೈಗೆಟುಕುವ ದರದಲ್ಲಿ ಮ್ಯಾನ್ ಚಿಕಿತ್ಸೆ ಒದಗಿಸುವ ಉಪಕರಣಗಳನ್ನು ವಿದೇಶದಿಂದ ರಪ್ತು ಮಾಡಿಕೊಳ್ಳಲು ಅನುಕೂಲವಾಗುವಂತೆ ತೆರಿಗೆ ವಿನಾಯಿತಿ ಮಾಡುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಬದಲಾದ ಆಹಾರ ಶೈಲಿ, ಜೇವನ್ ಪದ್ಧತಿ ಸೇರಿ ಅನೇಕ ಕಾರಣಗಳಿಂದಾಗಿ ಕ್ಯಾನ್ಸರ್ ಪೀಡಿತರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗುತ್ತಿದೆ. ಈಗಾಗಲೇ ಕೇಂದ್ರ ಸರಕಾರ ಕ್ಯಾನ್ಸರ್ ನಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಿಮೋಥೆರಪಿಗೆ ಬಳಸುವ ಅನೇಕ ಔಷಧಗಳಿಗೆ ಕಸ್ಟಮ್ಸ್ ರಿಯಾಯಿತಿ ನೀಡಲಾಗಿದೆ ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ.

ಅದೇ ರೀತಿ ಕ್ಯಾನ್ಸರ್ ನಿಂದ ಸಂಪೂರ್ಣ ಗುಣಮುಖರಾಗಲು ಮುಂದುವರಿದ ಚಿಕಿತ್ಸೆಯ ಭಾಗವಾಗಿ ಕಿಮೋಥೆರಪಿಯ ಜತೆಗೆ ಇಮ್ಯುನೋಥೆರಪಿಯ ಅವಶ್ಯಕತೆ ಇದ್ದು, ಈ ಚಿಕಿತ್ಸೆಗೆ ಪ್ರತಿ ರೋಗಿಗೆ 20 ರಿಂದ 50 ಲಕ್ಷ ರು.ಗಳು ಖರ್ಚಾಗುತ್ತದೆ. ಹೀಗಾಗಿ, ವಿದೇಶಗಳಿಂದ ಅಮದು ಮಾಡಿಕೊಳ್ಳುವ ಈ ಔಷಧಗಳ ಮೇಲೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡುವಂತೆ ಹಣಕಾಸು ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.

ಸರಕಾರ ಈ ರೀತಿಯ ಸುಂಕ ರಿಯಾಯಿತಿ ನೀಡುವುದರಿಂದ ಕ್ಯಾನ್ಸರ್ ಪೀಡಿತ ಬಡರೋಗಿಗಳಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯಲಿದೆ. ಇಲ್ಲವಾದಲ್ಲಿ ಅತಿ ಹೆಚ್ಚಿನ ದರ ನೀಡಿ ಚಿಕಿತ್ಸೆ ಅಗತ್ಯವಾದ ಔಷಧಿಗಳನ್ನು ಖರೀಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ನಿಟ್ಟಿನಲ್ಲಿ ನನ್ನ ಮನವಿಗೆ ಹಣಕಾಸು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ.


Share It

You cannot copy content of this page