ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಎಸ್.ಐ.ಟಿ ತನಿಖೆ ಬಿರುಸಾಗಿ ಸಾಗಿದೆ.
ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಇದಕ್ಕಾಗಿ ಎಸ್ಐಟಿ ತನಿಖಾ ತಂಡ ಪ್ರಜ್ವಲ್ ರೇವಣ್ಣ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲೇ ಬೀಡುಬಿಟ್ಟು ಆತನನ್ನು ಬಂಧಿಸಲು ಸಜ್ಜಾಗಿದೆ.
ಈ ಸುದ್ದಿ ಎಸ್ಐಟಿ ತನಿಖಾ ತಂಡದಿಂದಲೇ ಗೊತ್ತಾಗಿರುವ ಕಾರಣ ಇಂದು ಸಂಜೆಯೊಳಗೆ ಪ್ರಜ್ವಲ್ ರೇವಣ್ಣ ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ನಂತರ ಅವರು ಬಂಧನಕ್ಕೊಳಗಾಗುವುದು ಖಚಿತವಾಗಿದೆ.
ಈ ರೀತಿ ಪ್ರಜ್ವಲ್ ರೇವಣ್ಣ ದಿಢೀರ್ ವಿದೇಶದಿಂದ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್ಐಟಿ ತನಿಖಾ ತಂಡಕ್ಕೆ ಶರಣಾಗುವಂತೆ ಕಳೆದ ಶನಿವಾರ ರಾತ್ರಿಯೇ ತಂದೆ ಶಾಸಕ ಎಚ್.ಡಿ.ರೇವಣ್ಣ ಮೊಬೈಲ್ ಫೋನ್ ಕರೆ ಮಾಡಿ ಪುತ್ರ ಪ್ರಜ್ವಲ್ ಗೆ ದಬಾಯಿಸಿದ್ದಾರೆ ಎಂದು ತಿಳಿದುಬಂದಿದೆ.