ಸುದ್ದಿ

ಸೆ. 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕೃಷ್ಣೆಗೆ ಬಾಗಿನ

Share It


ವಿಜಯಪುರ: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಸಹಯೋಗದಲ್ಲಿ ಸೆ.೬ರಂದು ಆಲಮಟ್ಟಿಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜವಳಿ, ಸಚಿವರಾದ ಶಿವಾನಂದ ಎಸ್.ಪಾಟೀಲ, ಡಾ.ಎಂ.ಬಿ.ಪಾಟೀಲ, ಆರ್.ಬಿ.ತಿಮ್ಮಾಪೂರ ಉಪಸ್ಥಿತರಿರಲಿದ್ದಾರೆ.


Share It

You cannot copy content of this page