ಅಪರಾಧ ಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಯೂಟ್ಯೂಬರ್ ಮನಾಫ್‌ಗೆ ಎಸ್‌ಐಟಿ ನೋಟಿಸ್

Share It

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮಾಡಿ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನಿಡಿದೆ.

ಕೇರಳ ಮೂಲದ ಯೂಟ್ಯೂಬರ್ ಮನಾಫ್, ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಆರಂಭದಿಂದಲೂ ತನ್ನ ಯೂಟ್ಯೂಬ್‌ನಲ್ಲಿ ಕಥೆ ಕಟ್ಟಿದ್ದ. ಜಯಂತ್.ಟಿ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ.

ಇನ್ನು ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್‌ನಲ್ಲಿ ಜುಲೈ ೧೧ ರಂದು ಅಪ್ಲೋಡ್ ಆಗಿತ್ತು. ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಆ ಮೂಲಕ ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು.
ಮಹೇಶ್ ತಿಮರೋಡಿ ಮನೆಗೆ ಮನಾಫ್ ಭೇಟಿ
ಮನಾಫ್, ಪ್ರಕರಣ ಆರಂಭಕ್ಕೂ ಮೊದಲೇ ಧರ್ಮಸ್ಥಳ, ಉಜಿರೆ, ಬೆಳ್ತಂಗಡಿ ಸುತ್ತಾಮುತ್ತಾ ಓಡಾಡಿದ್ದ. ಮಹೇಶ್ ತಿಮರೋಡಿ ಮನೆಗೂ ಭೇಟಿ ನೀಡಿ ಹೋರಾಟಕ್ಕೆ ಅಭಿನಂದನೆ ಸಲ್ಲಿಸಿದ್ದ.


Share It

You cannot copy content of this page