ಉಪಯುಕ್ತ ಸುದ್ದಿ

ಮುಜರಾಯಿ ಇಲಾಖೆಯ ಮಹತ್ವದ ನಿರ್ಧಾರ: ಧಾರ್ಮಿಕ ಸೌಧ ನಿರ್ಮಾಣಕ್ಕೆ ಸಂಪುಟದ ಒಪ್ಪಿಗೆ

Share It

ಬೆಂಗಳೂರು: ಮುಜರಾಯಿ ಇಲಾಖೆಯ ಮಹತ್ವದ ಯೋಜನೆಯಾದ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಪ್ರಥಮ ಬಾರಿಗೆ ಮುಜರಾಯಿ ಇಲಾಖೆಗೆ ಪ್ರತಿಷ್ಠಿತ ಕಟ್ಟಡ ಹೊಂದಿದಂತಾಗಲಿದೆ. ಮುಜರಾಯಿ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಂತಹ ನಂತರ ರಾಮಲಿಂಗಾರೆಡ್ಡಿ ಅವರು ಈ ಇಲಾಖೆಗೆ ಹೊಸ ರೀತಿಯ ಆಯಾಮವನ್ನು ನೀಡುತ್ತಾ ಬಂದಿರುತ್ತಾರೆ. ಭಕ್ತರು ಮತ್ತು ಅರ್ಚಕ ಸಿಬ್ಬಂದಿ ಇವರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನ ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿದ್ದಾರೆ.

ಮುಜರಾಯಿ ಇಲಾಖೆಗೆ ತನ್ನದೇ ಆದಂತಹ ಕಟ್ಟಡ ಇರಲಿಲ್ಲ. ಇಲ್ಲಿ ತನಕ ಇದು ಚಾಮರಾಜಪೇಟೆಯಲ್ಲಿ ಕಾರ್ಯವನ್ನು ನಿರ್ವಹಿಸುತ್ತಿತ್ತು. ರಾಮಲಿಂಗಾರೆಡ್ಡಿ ಅವರ ಆಸಕ್ತಿಯ ಕಾರಣದಿಂದಾಗಿ ಕೆ.ಆರ್. ವೃತ್ತದಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ಸುಮಾರು ಹತ್ತು ಸಾವಿರ ಚದರ ಅಡಿ ಜಾಗದಲ್ಲಿ 27 ಕೋಟಿ ರೂಪಾಯಿಗಳ ವೆಚ್ಚದಲ್ಲಿ 5 ಅಂತಸ್ತಿನ ಧಾರ್ಮಿಕ ಸೌಧ ಕಟ್ಟಡ ನಿರ್ಮಾಣವಾಗಲಿದೆ.

ಕಟ್ಟಡ ನಿರ್ಮಾಣ ಮಾಡಲು ಬೇಕಾದ ಸಿದ್ಧತೆಗಳನ್ನ ಮಾಡಿಕೊಂಡು ಇದೀಗ ಸಂಪುಟದ ಅನುಮತಿ ಪಡೆದುಕೊಂಡಿದ್ದಾರೆ. ಈ ಕಟ್ಟಡದಲ್ಲಿ ಮುಜರಾಯಿ ಇಲಾಖೆ ಆಯುಕ್ತರ ಕಚೇರಿ ಸೇರಿದಂತೆ ಇಲಾಖೆಯ ಎಲ್ಲ ಕಚೇರಿಗಳು, ಪಾರ್ಕಿಂಗ್ ವ್ಯವಸ್ಥೆಯನ್ನೊಳಗೊಂಡ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ.

ಸರಕಾರ ಮತ್ತು ಮುಜರಾಯಿ ಇಲಾಖೆಯ ಈ ನಿರ್ಧಾರಕ್ಕೆ ಕರ್ನಾಟಕ ರಾಜ್ಯ ಮುಜರಾಯಿ ಇಲಾಖೆ ದೆವಸ್ಥಾನಗಳ ಅರ್ಚಕರ ಸಂಘ ಸೇರಿದಂತೆ ಅನೇಕ ಧಾರ್ಮಿಕ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಎಂದುಕೊಳ್ಳುವ ಬಿಜೆಪಿ ನಾಯಕರು ಮಾಡದ ಕೆಲಸವನ್ನು ಕಾಂಗ್ರೆಸ್ ಸರಕಾರ ಮತ್ತು ರಾಮಲಿಂಗಾ ರೆಡ್ಡಿ ಅವರು ಮಾಡಿ ತೋರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.


Share It

You cannot copy content of this page