ಉಪಯುಕ್ತ ಸುದ್ದಿ

ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳುವಂತಿಲ್ಲ: ರಾಜ್ಯ ಸರ್ಕಾರದ ಮಹತ್ವದ ಆದೇಶ

Share It

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಶುಕ್ರವಾರ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


Share It

You cannot copy content of this page