ಉಪಯುಕ್ತ ಸುದ್ದಿ

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : 4,346 ಹುದ್ದೆ ಭರ್ತಿಗೆ ಸಿದ್ದತೆ ನಡೆಸಿದ ಪೊಲೀಸ್ ಇಲಾಖೆ

Share It

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ೪,೩೪೬ ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ. ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಸಿಬ್ಬಂದಿ ಒಳಗೊಂಡು ಒಟ್ಟು ೧,೧೧,೩೩೦ ಮಂಜೂರಾದ ಹುದ್ದೆಗಳಿವೆ. ಆ ಪೈಕಿ ೧೮,೫೮೧ ಹುದ್ದೆಗಳು ಖಾಲಿ ಇವೆ. ಹೀಗಾಗಿ, ಕರ್ತವ್ಯದಲ್ಲಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಸೃಷ್ಟಿಯಾಗಿದೆ. ತಕ್ಷಣವೇ ಕೆಲವು ಹುದ್ದೆಗಳನ್ನಾದರೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಂಡು ಸಿಬ್ಬಂದಿ ಮೇಲಿನ ಒತ್ತಡ ಕಡಿಮೆ ಮಾಡಲು ಇಲಾಖೆ ಮುಂದಾಗಿದೆ.
ಈ ಸಂಬAಧ ನೇಮಕಾತಿ ವಿಭಾಗದ (ಪೊಲೀಸ್) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀA, ಒಳಮೀಸಲಾತಿ ಜಾರಿಗೆ ಬಂದಿರುವ ಕಾರಣ ಹುದ್ದೆಗಳನ್ನು ಮರು ಹಂಚಿಕೆ ಮಾಡಿ, ಆ ಪಟ್ಟಿಯನ್ನು ನೇಮಕಾತಿ ವಿಭಾಗಕ್ಕೆ ರವಾನಿಸಿದ್ದಾರೆ.
ಸದ್ಯ, ಡಿಟೆಕ್ಟಿವ್ ಸಬ್ ಇನ್‌ಸ್ಪೆಕ್ಟರ್, ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್, ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್, ವಿಶೇಷ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ (ಕೆಎಸ್‌ಆರ್‌ಪಿ), ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕಲ್ಯಾಣ ಕರ್ನಾಟಕ, ಕಲ್ಯಾಣ ಕರ್ನಾಟಕೇತರ ಭಾಗಕ್ಕೆ ಹುದ್ದೆಗಳನ್ನು ಮರು ಹಂಚಿಕೆ ಮಾಡಲಾಗಿದೆ.
ಪರಿಶಿಷ್ಟ ಜಾತಿಯ ಒಳಮೀಸಲಾತಿ ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ರಾಜ್ಯ ಸರ್ಕಾರ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದ ಬೆನ್ನಲ್ಲೇ ಪೊಲೀಸ್ ಇಲಾಖೆಯ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ನೇರ ನೇಮಕಾತಿ ವೇಳೆ ಅನುಸರಿಸಬೇಕಾದ ಪರಿಷ್ಕೃತ ಮೀಸಲಾತಿ ರೋಸ್ಟರ್ ನಿಗದಿಪಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ ೪,೩೪೬ ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ.
ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗ (ಬಿಪಿಆರ್‌ಡಿ) ಪ್ರತಿ ವರ್ಷ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಮಾಹಿತಿಯನ್ನು ಪ್ರಕಟಿಸುತ್ತದೆ. ಆ ಪ್ರಕಾರ ರಾಜ್ಯದಲ್ಲಿ ೧ ಲಕ್ಷ ಜನರಿಗೆ ಕೇವಲ ೧೬೫ ಪೊಲೀಸರಷ್ಟೇ ಕೆಲಸ ಮಾಡುತ್ತಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಒಂದು ಲಕ್ಷ ಜನರಿಗೆ ೧೯೬ ಪೊಲೀಸರಿದ್ದಾರೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸರಿದ್ದಾರೆ. ಕರ್ನಾಟಕದಲ್ಲೂ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Share It

You cannot copy content of this page