ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ.
ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ಅಂತಿಮ ವರ್ಷದ ಬಿಬಿಎಂ ಒದುತ್ತಿದ್ದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತರು. ಬೆಂಗಳೂರಿನಿಂದ 7 ಮಂದಿ ಪ್ರವಾಸಕ್ಕೆಂದು ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಎಡಮುರಿ ಬಳಿ ಈಜಲು ಹೋಗಿದ್ದಾಗ ಆಯತಪ್ಪಿ ಬಿದ್ದ ಪರಿಣಾಮ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ.
ಜೊತೆಯಲ್ಲಿದ್ದ ಸ್ನೇಹಿತರು ಕೂಡಲೇ ಕೆ.ಆರ್.ಎಸ್. ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಶ್ರೀರಂಗಪಟ್ಟಣ ಅಗ್ನಿಶಾಮಕ ಸಿಬ್ಬಂದಿ ಮೃತ ಇಬ್ಬರು ವಿದ್ಯಾರ್ಥಿಗಳ ಶವ ಹೊರ ತೆಗೆದಿದ್ದಾರೆ. ಕೆ.ಆರ್.ಎಸ್. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹಗಳನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.