ಬೀದರ್: ಖಾಸಗಿ ಶಾಲಾ ಬಸ್ ಹರಿದು ಯುಕೆಜಿ ಓದುತ್ತಿದ್ದ 6 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ನಡೆದಿದೆ.
ಕಾವೇರಿ ಆಕಾಶ್ ಮೃತ ಬಾಲಕಿ. ವಿದ್ಯಾರ್ಥಿನಿ ಶಾಲೆಯ ಬಸ್‌ನಿಂದ ಕೆಳಗಡೆ ಇಳಿಯುವಾಗ ಅವಘಡ ಸಂಭವಿಸಿದ್ದು, ಶಾಲಾ ವಾಹನದ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಚಾಲಕ ಹಾಗೂ ಶಾಲೆಯ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.

ಚಾಲಕನ ವಿರುದ್ಧ ಔರಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪುಟ್ಟ ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.