ರಾಜಕೀಯ ಸುದ್ದಿ

ನೇಪಾಳ ಪ್ರಧಾನಿ ಕೆಪಿ ಓಲಿ ರಾಜಿನಾಮೆ: ನೆರೆ ರಾಷ್ಟ್ರದಲ್ಲಿ ರಾಜಕೀಯ ತಲ್ಲಣ

Share It

ಕಠ್ಮಂಡು: ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಪ್ರಧಾನಿ ಕೆಪಿ ಓಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಅವರ ಮೇಲೆ ರಾಜೀನಾಮೆ ನೀಡುವಂತೆ ಒತ್ತಡವಿತ್ತು. ಸೇನಾ ಮುಖ್ಯಸ್ಥರು ಪ್ರಧಾನಿ ಬಳಿ ರಾಜೀನಾಮೆ ನೀಡುವಂತೆ ಕೇಳಿದ್ದರು. ಪ್ರತಿಭಟನಾಕಾರರು ಪ್ರಧಾನಿಯವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದರು.

ಪ್ರಧಾನಿ ಕೆ.ಪಿ. ಶರ್ಮಾ ಓಲಿ ದೇಶ ಬಿಟ್ಟು ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂಬ ಸುದ್ದಿ ಈ ಹಿಂದೆ ಬಂದಿತ್ತು. ಅವರು ಹಲವಾರು ಸಚಿವರೊಂದಿಗೆ ದೇಶ ಬಿಟ್ಟು ಪಲಾಯನ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ವಿಮಾನ ನಿಲ್ದಾಣದಲ್ಲಿ ಹಲವಾರು ಹೆಲಿಕಾಪ್ಟರ್‌ಗಳು ಮತ್ತು ವಿಮಾನಗಳನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿತ್ತು.


Share It

You cannot copy content of this page