ಬೆಂಗಳೂರು: ಸರ್ಕಾರ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ
ಕವಿತಾ ಎಸ್.ಮನ್ನಿಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ, ಕೆ.ನಾಗೇಂದ್ರ ಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ದಲ್ಲೀತ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ನಗರಪಾಲಿಕೆ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ಹುದ್ದೆಗೆ, ಹುದ್ದೆ ನಿರೀಕ್ಷಣೆಯಲ್ಲಿದ್ದ ಎಸ್.ನವೀನ್ ಕುಮಾರ್ ರಾಜು ಅವರನ್ನು ಬೆಂಗಳೂರು ದಕ್ಷಿಣ ನಗರಪಾಲಿಕೆ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ಹುದ್ದೆಗೆ ವರ್ಗಾವಣೆ ಮಾಡಿದೆ.
ಪಂಚಾಯತ್ ರಾಜ್ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.